ಜೈನ ಸಂದೇಶ ನವದೆಹಲಿ :
ಜೈನ ಸಮಾಜದ ಸರ್ವತೋಮುಖ ಏಳಿಗೆಗಾಗಿ ರಾಜ್ಯದಲ್ಲಿ ಪ್ರತ್ಯೇಕ ಜೈನ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಮತ್ತು ಸಮಾಜದ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ಸರ್ಕಾರವನ್ನು ಕೇಂದ್ರ ಸಚಿವ ಪಲ್ಲಾಶಿ ಒತ್ತಾಯಿಸಿದ್ದಾರೆ.
ಈ ಕುರಿತು ಸಿಎಂ ಡಿ.ಕೆ.ಶಿವಕುಮಾರ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ 20 ಲಕ್ಷಕ್ಕೂ ಹೆಚ್ಚು ಜೈನ ಸಮಾಜದ ಬಂಧುಗಳು ವಾಸಿಸುತ್ತಿದ್ದಾರೆ, ವಿಶೇಷವಾಗಿ ಗ್ರಾಮೀಣ ಪ್ರದೇಶದ ಅನೇಕ ಕುಟುಂಬಗಳು ಆರ್ಥಿಕ ಮತ್ತು ಶೈಕ್ಷಣಿಕವಾಗಿ ಸಂಕಷ್ಟದಲ್ಲಿವೆ. ಈ ಸೇರಿದಂತೆ ಅಖಿಲ ಭಾರತ ಭಟ್ಟಾರಕ ಜೈನ ಮಠ ಪರಿಷತ್ ಹಾಗೂ ಸಮಸ್ತ ಜೈನ ಸಮಾಜವು ಹಲವು ವರ್ಷಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಲೇ ಬಂದಿವೆ.

ಅವರ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ರಾಷ್ಟ್ರಸಂತ ಆಚಾರ್ಯ ಶ್ರೀ ಗುಣಧರನಂದಿ ಮಹಾರಾಜರು ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದು, ಜೈನ ಸಮಾಜ ಸಂಪೂರ್ಣ ಬೆಂಬಲ ಸೂಚಿಸಿದೆ ಎಂದು ಪತ್ರದಲ್ಲಿ ಪ್ರಲ್ಹಾದ ಜೋಶಿ ಉಲ್ಲೇಖಿಸಿದ್ದಾರೆ.